ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯತೆಗೆ ಕಳಂಕ ತರುತ್ತಿರುವವರ ವಿರುದ್ಧ ತನಿಖೆ ನಡೆಸಲು ಶ್ರೀ ಧರ್ಮಸ್ಥಳ ಕ್ಷೇತ್ರದ ಅಭಿಮಾನಿಗಳ ವೇದಿಕೆಯಿಂದ ಮುಖ್ಯಮಂತ್ರಿಗಳಿಗೆ ಪುತ್ತೂರಿನ ಉಪ ತಹಸೀಲ್ದಾರ್ ಮೂಲಕ ಮನವಿ

ಪುತ್ತೂರು: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ
ದೇವಾಲಯದ ಪಾವಿತ್ರ್ಯತೆಗೆ ಕಳಂಕ ತರುತ್ತಿರುವ ಬಗ್ಗೆ ಮತ್ತು ಇದರ ಒಳಸಂಚಿನ ವಿರುದ್ಧ ಸೂಕ್ತ ತನಿಖೆಯನ್ನು ಕೈಗೊಳ್ಳಬೇಕೆಂದು ಪುತ್ತೂರಿನಲ್ಲಿ ನಡೆದ ಜನಾಗೃಹ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಪುತ್ತೂರು ಉಪತಹಸೀಲ್ದಾ‌ರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ.

ಧರ್ಮಸಂರಕ್ಷಣಾ ವೇದಿಕೆ ಪುತ್ತೂರು ತಾಲೂಕಿನ ಅಧ್ಯಕ್ಷ ಶಶಿಕುಮಾ‌ರ್ ರೈ ಬಾಲ್ಗೊಟ್ಟು ಅವರ ನಿಯೋಗದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ತಾ.ಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರಸಭೆ ಸದಸ್ಯ ಕೆ.ಜೀವಂಧರ್ ಜೈನ್, ಜನಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ಲೋಕೇಶ್ ಹೆಗ್ಡೆ, ಎಪಿಎಂಸಿ ಮಾಜಿ ಅಧ್ಯಕ್ಷ ಬೂಡಿಯಾ‌ರ್ ರಾಧಾಕೃಷ್ಣ ರೈ, ಡಾ. ನಾರಾಯಣ ಭಟ್, ವಿರೂಪಾಕ್ಷ ಭಟ್ ಮಚ್ಚಿಮಲೆ, ಉದಯ ಹೆಚ್, ಯುವರಾಜ್ ಪೆರಿಯತ್ತೋಡಿ ಅವರು ಉಪತಹಶೀಲ್ದಾರ್ ರವಿ ಅವರಿಗೆ ಮನವಿಯನ್ನು ಹಸ್ತಾಂತರಿಸಿದರು.

News Editor

Learn More →

Leave a Reply

Your email address will not be published. Required fields are marked *