
ಉಜಿರೆ: ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಜಿರೆಯ ಹಳ್ಳಿಮನೆ ಸಮೀಪ ಸೆ.3 ರಂದು ಸಂಜೆಯ ವೇಳೆ ನಡೆದಿದೆ.

ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಬೈಕ್ ವಿರುದ್ಧ ದಿಕ್ಕಿನಿಂದ ಅಡುಗೆ ಅನಿಲ ತೆಗೆದುಕೊಂಡು ಬರುತ್ತಿದ್ದ ಲಾರಿಯ ಮಧ್ಯೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಬಗ್ಗೆ ತಿಳಿದು ಬಂದಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನ ಸಂಪೂರ್ಣ ಹಾನಿಗೊಂಡಿದೆ.
ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
