
ಮಂಗಳೂರಿನ ಜಿಎಂಪಿಎಲ್ ಕಂಪೆನಿಯಲ್ಲಿ ಹಿಂದಿನ ಜೆಬಿಎಫ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದವರಿಗೆ ನೇರವಾಗಿ ಖಾಯಂ ಉದ್ಯೋಗ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಇಂದು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಶ್ರೀ Hardeep Singh Puri ಅವರನ್ನು ನಳಿನ್ ಕುಮಾರ್ ಕಟೀಲ್ ಅವರು ಭೇಟಿಯಾಗಿ ಮನವಿ ಸಲ್ಲಿಸಿದರು .
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಶೀಘ್ರದಲ್ಲಿಯೇ ನಿರ್ಣಯ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ಶ್ರೀ Rajesh Naik U ಹಾಗೂ ಮೂಲ್ಕಿ-ಮೂಡಬಿದಿರೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಅವರು ಉಪಸ್ಥಿತರಿದ್ದರು.


