
ಬಂಟ್ವಾಳ: ಮನೆಯೊಂದಕ್ಕೆ ಬೆಂಕಿ ತಗುಲಿ ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬವಿನಲ್ಲಿ ಇಂದು ಮುಂಜಾನೆ ನಡೆದಿದೆ.

ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗುಲಿದ್ದು ಮನೆ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.ಮುಂಜಾನೆ 4ರ ಸುಮಾರಿಗೆ ಘಟನೆ ನಡೆದಿದ್ದು, ಮಲಗಿದ್ದ ಮನೆ ಮಂದಿ ಹೊರಬಂದು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಆರ್ ಸಿ ಸಿ ಮನೆ ಇದಾಗಿದ್ದು, ಮನೆಯೊಳಗಿದ್ದ ವಿದ್ಯುತ್ ಪರಿಕರಗಳು, ಇತರ ಸೊತ್ತುಗಳು ಸಂಪೂರ್ಣ ಸುಟ್ಟು ಹೋಗಿದೆ. ಬಂಟ್ವಾಳ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.
