ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಿತಾಸಕ್ತಿಯನ್ನು ಸರ್ಕಾರ ಕಡೆಗಣಿಸುತ್ತಿದೆ

ಪರಿಶಿಷ್ಟ ಜಾತಿಯ ಪ್ರವರ್ಗದಡಿಯಲ್ಲಿ ಒಳಮೀಸಲಾತಿಯನ್ನು ಅವೈಜ್ಞಾನಿಕವಾಗಿ ಹಂಚಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಪ್ರತಿಭಟಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಂಜಾರ, ಭೋವಿ, ಕೊರಚ ಮತ್ತು ಕೊರಮ ಸಮುದಾಯಗಳು ನಡೆಸುತ್ತಿರುವ ಬೃಹತ್ ಧರಣಿಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದ ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ಶಾಸಕರಾದ ವಿಜಯೇಂದ್ರ ಯಡಿಯೂರಪ್ಪನವರು ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಿತಾಸಕ್ತಿಯನ್ನು ಕಡೆಗಣಿಸಿ ಆಡಳಿತ ನಡೆಸುತ್ತಿದೆ. ಶೋಷಿತ ಸಮುದಾಯಗಳ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಿ ದಮನಿತ ಸಮುದಾಯಗಳ ಒಗ್ಗಟ್ಟು ಮುರಿಯಲು ಹೊರಟಿದೆ. ಪರಿಶಿಷ್ಟ ಜಾತಿ ಸಮುದಾಯಗಳ 101 ಜಾತಿಗಳಲ್ಲಿ ಯಾವುದೇ ಒಂದು ಸಮುದಾಯಕ್ಕೆ ಅನ್ಯಾಯವಾಗದ ರೀತಿಯಲ್ಲಿ ಸರ್ವೋಚ್ಛ ನ್ಯಾಯಾಲಯದ ತೀರ್ಪಿಗೆ ಅನುಗುಣವಾಗಿ ಸರ್ಕಾರ ಒಳಮೀಸಲಾತಿಯನ್ನು ಹಂಚಿಕೆ ಮಾಡಲಿ. ಸದ್ಯ ಜಾರಿಗೆ ತಂದಿರುವ ಒಳ ಮೀಸಲಾತಿ ನೀತಿಯ ದೋಷಗಳನ್ನು ಈ ಕೂಡಲೇ ಸರಿಪಡಿಸಲಿ ಎಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ.ರಾಜೀವ್, ಮಾಜಿ ಸಚಿವರಾದ ಪ್ರಭು ಚೌಹಾಣ್, ಸುನೀಲ್ ವಲ್ಯಾಪುರೆ, ಮಾಜಿ ಸಂಸದರಾದ ಉಮೇಶ್ ಜಾಧವ್, ಶಾಸಕರಾದ ಮಾನಪ್ಪ ವಜ್ಜಲ್, ಎಂ. ಚಂದ್ರಪ್ಪ, ಚಂದ್ರು ಲಮಾಣಿ, ಕೃಷ್ಣ ನಾಯಕ್, ಡಾ. ಅವಿನಾಶ್ ಜಾಧವ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳೀಕೆರೆ, ಸೇರಿದಂತೆ ಸಮುದಾಯಗಳ ಪ್ರಮುಖರು, ಹಾಗೂ ಸಮುದಾಯಗಳ ಬಂಧುಗಳು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.