ನ್ಯೂಸ್ ಕುಡ್ಲ

0 Minutes
ನ್ಯೂಸ್ ಕುಡ್ಲ

ಪುತ್ತೂರು: ದರ್ಬೆ ಗಲಾಟೆ ಪ್ರಕರಣ: ಪೋಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಂಡು, ಆರೋಪಿಗಳನ್ನು ಎರಡು ದಿನಗಳೊಳಗೆ ಬಂಧಿಸಬೇಕೆಂದು- ವಿಶ್ವಹಿಂದೂ ಪರಿಷತ್

ಪುತ್ತೂರಿನ ದರ್ಬೆಯಲ್ಲಿ ನಡೆದ ಮಹಿಳೆಯ ಮೇಲಿನ ಹಲ್ಲೆ ಪ್ರಕರಣವನ್ನು ಪೋಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಂಡು, ಆರೋಪಿಗಳನ್ನು ಎರಡು ದಿನಗಳೊಳಗೆ ಬಂಧಿಸಬೇಕೆಂದು ವಿಶ್ವಹಿಂದೂ ಪರಿಷತ್ ಪೋಲೀಸ್ ಇಲಾಖೆಯನ್ನು ಒತ್ತಾಯಿಸಿದೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ವಿಶ್ವಹಿಂದೂ ಪರಿಷತ್ ನ ಪುತ್ತೂರು ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ ಜೆರಾಕ್ಸ್ ಅಂಗಡಿಯಲ್ಲಿ ನಡೆದಿರುವುದು ಗ್ರಾಹಕ ಮತ್ತು...
Read More
0 Minutes
ನ್ಯೂಸ್ ಕುಡ್ಲ ನ್ಯೂಸ್ ಫೋಕಸ್

ಕರಾವಳಿಗರ ದಶಕದ ಕನಸು ನನಸು: ಪಾಲಕ್ಕಾಡ್‌ನಿಂದ ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಸೇರ್ಪಡೆ

ಮಂಗಳೂರು: ಕರ್ನಾಟಕದ ಕರಾವಳಿ ಭಾಗದ ಜನರ ದಶಕಗಳ ಬಹುಮುಖ್ಯ ಬೇಡಿಕೆಯಾಗಿದ್ದ ಮಂಗಳೂರು ರೈಲ್ವೆ ವ್ಯಾಪ್ತಿಯನ್ನು ನೈರುತ್ಯ ರೈಲ್ವೆಗೆ (South Western Railway – SWR) ಸೇರ್ಪಡೆಗೊಳಿಸಲು ರೈಲ್ವೆ ಮಂಡಳಿ ಅಧಿಕೃತ ಆದೇಶ ಹೊರಡಿಸಿದೆ. ಈ ಮಹತ್ವದ ಆದೇಶದ ಪ್ರಕಾರ, ಸದರಿ ವ್ಯಾಪ್ತಿಯು ದಕ್ಷಿಣ ರೈಲ್ವೆಯಿಂದ (Southern Railway...
Read More
0 Minutes
ನ್ಯೂಸ್ ಕುಡ್ಲ

ವಿಟ್ಲ: ಆಕ್ಟಿವಾ ಮತ್ತು ಪಿಕಪ್ ನಡುವೆ ಅಪಘಾತ- ಇಬ್ಬರು ಯುವತಿಯರು ಗಂಭೀರ

ವಿಟ್ಲ: ಪಿಕಪ್ ಹಾಗೂ ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಯುವತಿಯರು ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿಲ ಮುರುವ ತಿರುವಿನಲ್ಲಿ ನಡೆದಿದೆ. ಅಪಘಾತದಲ್ಲಿ ಆಕ್ಟಿವಾ ಸವಾರ ಹಾಗೂ ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿಕಪ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ...
Read More
0 Minutes
ನ್ಯೂಸ್ ಕುಡ್ಲ

ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ: 7 ಪ್ರಯಾಣಿಕರು ಪಾರು

ಉಡುಪಿ: ಬ್ರಹ್ಮಾವರ ಸಮೀಪ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದ್ದು, ಬಸ್‌ನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಬಳಿಕ ಬಸ್‌ನ ಎಲೆಕ್ಟ್ರಿಕಲ್ ಬಾಕ್ಸ್ (EDC Box) ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ...
Read More
0 Minutes
ನ್ಯೂಸ್ ಕುಡ್ಲ

ಉಳ್ಳಾಲ: ನಾಪತ್ತೆಯಾಗಿದ್ದ ಮೀನುಗಾರನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..!!

ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರರೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸೋಮವಾರ ಕೋಟೆಪುರ ಅಲಿವೆಬಾಗಿಲು ಬಳಿ ಪತ್ತೆಯಾಗಿದೆ. ಮೃತರನ್ನು ನಾರಾಯಣ(31) ಎಂದು ಗುರುತಿಸಲಾಗಿದೆ. ಮಂಗಳೂರು ದಕ್ಕೆಯಿಂದ ‘ಓಷನ್ ಸ್ಟಾರ್’ ಹೆಸರಿನ ಬೋಟ್ ನಲ್ಲಿ ಆ. 9ರಂದು...
Read More
0 Minutes
ನ್ಯೂಸ್ ಕುಡ್ಲ

ಪುತ್ತೂರು: ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ

ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ.ಶಾಂತಿನಗರ ಸಮೀಪದ ಕಲ್ಪಣೆ ಬಳಿ ಇರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಪ್ಲಾಸ್ಟಿಕ್‌ ಕಸ, ಸ್ಯಾನಿಟರಿ ಪ್ಯಾಡ್‌, ಪ್ಯಾಂಪರ್ಸ್‌ ಸೇರಿದಂತೆ ಹಸಿ...
Read More
0 Minutes
ನ್ಯೂಸ್ ಕುಡ್ಲ

ಮುಳಿಯ ಪ್ರತಿಷ್ಠಾನದಿಂದ “ಧನಾತ್ಮಕ ಪೋಷಕತ್ವ” ಆನ್‌ಲೈನ್ ಕಾರ್ಯಕ್ರಮ

ಮುಳಿಯ ಫೌಂಡೇಶನ್ ಹಾಗೂ ಮುಳಿಯ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಬೆಂಗಳೂರಿನ 81ಕ್ಕೂ ಹೆಚ್ಚು ಶಾಲೆಗಳಲ್ಲಿ ಆಯೋಜಿಸಲಾಗುತ್ತಿರುವ ‘ಧನಾತ್ಮಕ ಪೋಷಕತ್ವ’ ವಿಚಾರಸಂಕಿರಣ ಸರಣಿಯ ಉದ್ಘಾಟನಾ ಕಾರ್ಯಕ್ರಮವು ಆನ್‌ಲೈನ್ ಮೂಲಕ ನಡೆಯಲಿದೆ. ಪೋಷಕರು ಮತ್ತು ಮಕ್ಕಳನ್ನು ತಲುಪುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ಖ್ಯಾತ ನಟ, ಚಿಂತಕ...
Read More
0 Minutes
ನ್ಯೂಸ್ ಕುಡ್ಲ

ಕಡಬ: ಭಾರೀ ಸದ್ದಿನೊಂದಿಗೆ ಏಕಾಏಕಿ ಫ್ರಿಡ್ಜ್ ಸ್ಪೋಟ..!! ಪ್ರಾಣಾಪಾಯದಿಂದ ಪಾರಾದ ಮನೆಮಂದಿ

ಕಡಬ: ರಾಮಕುಂಜ ಗ್ರಾಮದ ಆತೂರಿನಲ್ಲಿ ಮನೆಯಲ್ಲಿದ್ದ ಫ್ರಿಡ್ಜ್ ಏಕಾಏಕಿ ಭೀಕರವಾಗಿ ಸ್ಫೋಟಗೊಂಡು ಮನೆಗೆ ಭಾರಿ ಪ್ರಮಾಣದಲ್ಲಿ ಹಾನಿಯಾದ ಘಟನೆ ಆಗಸ್ಟ್ 11ರ ಮಂಗಳವಾರ ಸಂಜೆ ಸಂಭವಿಸಿದೆ.ಆತೂರು ನಿವಾಸಿ, ಪ್ರಸ್ತುತ ವಿದೇಶದಲ್ಲಿ ಉದ್ಯೋಗದಲ್ಲಿರುವ ಸಿದ್ದೀಕ್ ಎಂಬವರ ಮನೆಯಲ್ಲಿ ಈ ದುರಂತ ನಡೆದಿದೆ. ಆಗಸ್ಟ್ 11ರ ಸಂಜೆಯ ವೇಳೆಗೆ ಮನೆಯಲ್ಲಿದ್ದ...
Read More
0 Minutes
ನ್ಯೂಸ್ ಕುಡ್ಲ

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಢಿಕ್ಕಿ..!! 15ಕ್ಕೂ ಹೆಚ್ಚು ಮಕ್ಕಳು ಪವಾಡಸದೃಶ ಪಾರು

ವಿಟ್ಲ: ಚಾಲಕನ ನಿಯಂತ್ರಣ ಕಳೆದು ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ವಿಟ್ಲದ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ಬಸ್ ಕುಂಟುಕುಡೇಲು ಇಳಿಜಾರಿನ ರಸ್ತೆಯಲ್ಲಿ ತಾಂತ್ರಿಕ ದೋಷದಿಂದ ನೇರವಾಗಿ ಕೆಳಗಡೆ ಚಲಿಸಿದೆ....
Read More
0 Minutes
ನ್ಯೂಸ್ ಕುಡ್ಲ

₹7 ಲಕ್ಷದ ಮರ ಕಡಿದು ಹಣ ಕೊಡದೆ ಎಸ್ಕೇಪ್: ಪಡುಬಿದ್ರೆ ಟೋಲ್‌ಗೇಟ್‌ನಲ್ಲಿ ಲಾರಿ ಅಡ್ಡಗಟ್ಟಿದ ಪೊಲೀಸರು

ಪಡುಬಿದ್ರೆ: ಹೆಬ್ರಿ ತಾಲೂಕಿನ ಮುದ್ರಾಡಿ ಹಾಗೂ ಮುನಿಯಾಲು ಪ್ರದೇಶದಲ್ಲಿ ರಬ್ಬರ್ ಮರಗಳನ್ನು ಕಡಿದು, ನಿಗದಿತ ಹಣ ಪಾವತಿಸದೆ ಮರದ ತುಂಡುಗಳನ್ನು ಲಾರಿಯಲ್ಲಿ ಸಾಗಿಸಿ ಪರಾರಿಯಾಗಲು ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ರಬ್ಬರ್ ಮರ ತುಂಬಿದ್ದ ಲಾರಿಯನ್ನು ಪಡುಬಿದ್ರೆ ಟೋಲ್‌ಗೇಟ್ ಬಳಿ ಪೊಲೀಸರು ತಡೆದು ನಿಲ್ಲಿಸಿದ ಘಟನೆ...
Read More