ಕ್ರೈಂ ನ್ಯೂಸ್

0 Minutes
ಕ್ರೈಂ ನ್ಯೂಸ್

ಮೂಡಬಿದ್ರಿ: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದೈವಸ್ಥಾನ ಕಳವು ಪ್ರಕರಣದ ಆರೋಪಿ ಬಂಧನ

ಮೂಡಬಿದ್ರಿ: ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೈವಸ್ಥಾನ ಕಳವು ಪ್ರಕರಣದಲ್ಲಿ ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್‌ ಆರೋಪಿಯನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಮುಲ್ಕಿ ಪೊಲೀಸ್ ಠಾಣೆಯ ಅ.ಕ್ರ.70/2018ರ ಕಲಂ 454, 457, 380 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂಡಬಿದ್ರಿಯ ಮಾನ್ಯ ಹಿರಿಯ...
Read More
0 Minutes
ಕ್ರೈಂ ನ್ಯೂಸ್

ಮದುವೆಯ ಭರವಸೆ ನೀಡಿ ದೈಹಿಕ ಸಂಪರ್ಕ ಆರೋಪ: ಮಹಿಳೆ ಮೇಲೆ ಹಲ್ಲೆ, ಬೆಳ್ತಂಗಡಿ ಮೂಲದ ಯುವ ವಕೀಲನ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ/ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ಮದುವೆಯಾಗಲು ನಿರಾಕರಿಸಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಳ್ತಂಗಡಿ ಮೂಲದ ಯುವ ವಕೀಲನ ವಿರುದ್ಧ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕಟ್ಟಿಲೊಡ್ಡಿ ನಿವಾಸಿ ಜಿಜೊ...
Read More
0 Minutes
ಕ್ರೈಂ ನ್ಯೂಸ್

ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಮನೆಯೊಂದಕ್ಕೆ ತೆರಳುವ ಕಾಲುದಾರಿಯಲ್ಲಿ ನವಜಾತ ಹೆಣ್ಣು ಶಿಶುವೊಂದು ಪತ್ತೆಯಾಗಿದೆ. ಇಂದು ಬೆಳಿಗ್ಗೆ ಸ್ಥಳೀಯರು ಕಾಲು ದಾರಿಯಲ್ಲಿ ತೆರಳುತ್ತಿದ್ದ ವೇಳೆ ಮಗು ಪತ್ತೆಯಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಪರೀಕ್ಷಿಸಿದಾಗ ಮಗುವಿನಲ್ಲಿ ಹೃದಯ ಬಡಿತ ಇರುವುದು ದೃಢಪಟ್ಟಿದ್ದು,...
Read More
0 Minutes
ಕ್ರೈಂ ನ್ಯೂಸ್

ಮಂಗಳೂರು: ಪತ್ನಿ, ಅತ್ತೆಗೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿ ಅರೆಸ್ಟ್..!!

ಮಂಗಳೂರು: ಪೆರುವಾಜೆ ಗ್ರಾಮದ ಕಾನಾವು ಸಮೀಪದ ಅನವುಗುಂಡಿಯಲ್ಲಿ ಪತ್ನಿ ಹಾಗೂ ಅತ್ತೆಗೆ ಚೂರಿಯಿಂದ ಇರಿದ ಘಟನೆ ರವಿವಾರ ಮಧ್ಯಾಹ್ನ ನಡೆದಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಅತ್ತೆ ಕುಸುಮ ಹಾಗೂ ಪತ್ನಿ ವಿನುತಾ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನವುಗುಂಡಿ ನಿವಾಸಿ ಗಣೇಶ ಎಂಬಾತ...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

ಪುತ್ತೂರು: ದೂರು ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ್ದ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಮೂವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.4ರಂದು ರಾತ್ರಿ ಪುತ್ತೂರು ಗ್ರಾಮಾಂತರ ಠಾಣೆಯ ಹೆಚ್‌ಸಿ ಮಧು ಹಾಗೂ ಸಿಪಿಸಿ ಭೀಮನಗೌಡ...
Read More
0 Minutes
ಕ್ರೈಂ ನ್ಯೂಸ್

ಮನೆಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ: ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

ಕಾಸರಗೋಡು: ಕರ್ನಾಟಕ ಮೂಲದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತರನ್ನು ರಮೇಶ್ (42) ಎಂದು ಗುರುತಿಸಲಾಗಿದೆ. ಹೊಸಂಗಡಿಯ ನರಸಿಂಹಮೂರ್ತಿ ಅವರಿಗೆ ಸೇರಿದ ಹಳೆಯ ಮನೆಯೊಂದರಲ್ಲಿ ಶುಕ್ರವಾರ ರಾತ್ರಿ ರಮೇಶ್ ಅವರ ಮೃತದೇಹ ಪತ್ತೆಯಾಗಿದ್ದು,...
Read More
0 Minutes
ಕ್ರೈಂ ನ್ಯೂಸ್

ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣ- ಆರೋಪಿಯ ಬಂಧನ

ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಅಂತರ್‌ರಾಜ್ಯ ಕಳ್ಳತನದ ಆರೋಪಿಯೊಬ್ಬನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಕೇರಳದ ಬದಿಯಡ್ಕದಲ್ಲಿ ಬಂಧಿಸಿದ್ದಾರೆ. ಕೇರಳ ಕಾಸರಗೋಡು ನಿವಾಸಿ ಸತೀಶ (31) ಬಂಧಿತ ಆರೋಪಿ.ದೇವಸ್ಥಾನದ ಆಡಳಿತ ಪದಾಧಿಕಾರಿ ಬೆಟ್ಟಂಪಾಡಿ ನಿವಾಸಿ ವಿನೋದ್ ಕುಮಾರ ಬಿ. (44)...
Read More
0 Minutes
ಕ್ರೈಂ ನ್ಯೂಸ್

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಮೇಲೆ ಮಾರಣಾಂತಿಕ ಹಲ್ಲೆ!!

ಬೆಂಗಳೂರು: ಕರ್ತವ್ಯನಿರತ ಜೈಲು ವಾರ್ಡರ್‌ ಮೇಲೆ ಜೈಲುವಾಸಿಗಳು ಮನಸೋ ಇಚ್ಛೆ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿರುವ ಘಟನೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ. ಮಂಜುನಾಥ ಹವೇಲಿ ಹಲ್ಲೆಗೊಳಗಾದ ಜೈಲು ವೀಕ್ಷಕ. ಸೆ. 2ರಂದು ಬೆಳಿಗ್ಗೆ 11:30ರ ಸುಮಾರಿಗೆ ಘಟನೆ ನಡೆದಿದ್ದು, ಮಂಗಳೂರಿನ ಭಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ...
Read More
0 Minutes
ಕ್ರೈಂ ನ್ಯೂಸ್

ವಿಟ್ಲ: ಯುವಕನನ್ನು ಅಪಹರಿಸಿ, ನಗ್ನ ವೀಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್- ಲಕ್ಷಕ್ಕೂ ಅಧಿಕ ಹಣ ಸುಲಿಗೆ

ವಿಟ್ಲ: ಯುವಕನೊಬ್ಬನನ್ನು ಕಾರಿನಲ್ಲಿ ಅಪಹರಿಸಿ, ಕೊಠಡಿಯಲ್ಲಿ ಕೂಡಿಹಾಕಿ ಅಪ್ರಾಪ್ತ ಬಾಲಕನೊಂದಿಗೆ ಬೆತ್ತಲೆಯಾಗಿ ನಿಲ್ಲಿಸಿ ವೀಡಿಯೋ ಚಿತ್ರೀಕರಿಸಿ, ಪೋಕ್ಸೋ ಕೇಸ್ ಹಾಕುವುದಾಗಿ ಬೆದರಿಕೆಯೊಡ್ಡಿ 1.02 ಲಕ್ಷ ರೂಪಾಯಿ ಸುಲಿಗೆ ಮಾಡಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ವಿಟ್ಲ ಸಮೀಪದ ಸೇರಾಜೆ ನಿವಾಸಿ ಎ.ಎಸ್. ಸುಜೀತ್ ನೀಡಿದ...
Read More
0 Minutes
ಕ್ರೈಂ ನ್ಯೂಸ್

ಮೂಡುಬಿದಿರೆ: ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ: ಕಾಂಗ್ರೆಸ್ ಮುಖಂಡ, ಸಂಘ ಪರಿವಾರದ ಕಾರ್ಯಕರ್ತರಿಬ್ಬರ ಮೇಲೆ FIR

ಮಂಗಳೂರು: :ಮೂಡುಬಿದಿರೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಓರ್ವ ಕಾಂಗ್ರೆಸ್ ಮುಖಂಡ ಸೇರಿ ಮೂವರ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಸಾಮಾಜಿಕ ಜಾಲತಾಣ ನಿರ್ವಹಿಸುವ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಆಪ್ತ ರಿತಿಲ್...
Read More